ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಮೂರು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 31ರಂದು ಚುನಾವಣೆ ನಡೆಯಲಿದೆ.
ಧಾರವಾಡ, ಕೊಡಗು ಮತ್ತು ಬೆಳಗಾವಿಯ ಸ್ಥಳೀಯ ಸಂಸ್ಥೆಯ ಮೂರು ವಿಧಾನ ಪರಿಷತ್ ಕ್ಷೇತ್ರಗಳಿಗೆ 31ರಂದು ಮತದಾನ ನಡೆಯಲಿದ್ದು, ನವೆಂಬರ್ ಮೂರರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಡಿ. ವಿದ್ಯಾಶಂಕರ್ ತಿಳಿಸಿದ್ದಾರೆ.
ಈ ಸಂಬಂಧ ನಾಮಪತ್ರ ಸಲ್ಲಿಸಲು ಇದೇ 14ರಂದು ಕೊನೆ ದಿನವಾಗಿದ್ದು, ನಾಮಪತ್ರ ಪರಿಶೀಲನೆ 15ರಂದು ನಡೆಯಲಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು 17 ಕಡೆಯ ದಿನವಾಗಿದೆ ಎಂದು ಹೇಳಿದ್ದಾರೆ.
ಹಾಲಿ ಸಚಿವರಾದ ಬಸವರಾಜ ಬೊಮ್ಮಯಿ (ಧಾರವಾಡ), ಸಿ.ಎಸ್. ಅರುಣ್ ಮಾಚಯ್ಯ (ಕೊಡಗು) ಮತ್ತು ಸತೀಶ್ ಜಾರಕಿಹೊಳಿ (ಬೆಳಗಾವಿ) ಅವರುಗಳು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ವಿವರಣೆ ನೀಡಿದ್ದಾರೆ. |