ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಅವರ ಅಂತ್ಯಕ್ರಿಯೆ ಇಂದು(ಬುಧವಾರ) ತಾಲ್ಲೂಕಿನ ಹೊಚಕನಳ್ಳಿ ಗ್ರಾಮದಲ್ಲಿ ನೆರವೇರಲಿದೆ.
ಗುಲ್ಬರ್ಗಾದಿಂದ ಪಟೇಲ್ ಅವರ ಪಾರ್ಥಿವ ಶರೀರವನ್ನು ನಗರಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಪಟೇಲ್ ನಿವಾಸದಲ್ಲಿ ಇಡಲಾಗಿದೆ. ಇಂದು ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರ ನಿಧನದ ಕುರಿತು ತೀವ್ರ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮೆರಾಜುದ್ದೀನ್ ನಿಧನದಿಂದ ರಾಜ್ಯ ಪ್ರಮುಖ ಅಲ್ಪಸಂಖ್ಯಾತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಸಾವಿನಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಯಾರೊಂದಿಗೂ ನೋವಾಗದೆ ಹಾಗೆ ನಡೆದುಕೊಳ್ಳುತ್ತಿದ್ದ ಅಪರೂಪದ ನಾಯಕ ಮೆರಾಜುದ್ದೀನ್. ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದಿದ್ದಾರೆ. |