ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರ, ರಾಮಚಂದ್ರ ಪುರ ಮಠ ಹಾಗೂ ಗೋಕರ್ಣ ದೇವಾಲಯ ಟ್ರಸ್ಟ್ ಗೆ ನೋಟೀಸ್ ಜಾರಿ ಮಾಡಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯಿಂದ ಗೋಕರ್ಣ ದೇವಾಲಯವನ್ನು ಹೊರಗಿಟ್ಟ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಎಂ.ಎಸ್. ಮುರಳೀಧರ ಹಾಗೂ ಎನ್. ಜಿ. ಪ್ರಕಾಶ್ ಅರ್ಜಿ ಸಲ್ಲಿಸಿದ್ದರು.
ಗೋಕರ್ಣ ದೇವಾಲಯವನ್ನು ಮಠಕ್ಕೆ ಹಸ್ತಾಂತರ ಮಾಡಿರುವ ಸರ್ಕಾರದ ಕ್ರಮ ಸರಿಯಾಗಿದ್ದಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ. ಅಶೋಕ್ ಹಿಂಚಗೇರಿ ಮತ್ತು ನ್ಯಾ. ಎನ್. ಆನಂದ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗಿಯ ಪೀಠ ಸರ್ಕಾರದ ಮುಜರಾಯಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಗೋಕರ್ಣ ದೇವಾಲಯದ ಆಡಳಿತ ಮಂಡಳಿಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿತು. |