ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕುರ್ಚಿಗಾಗಿ ಆಸೆ ಪಟ್ಟವನಲ್ಲ:ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕುರ್ಚಿಗಾಗಿ ಆಸೆ ಪಟ್ಟವನಲ್ಲ:ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆಗೂ ಆಸೆ ಪಟ್ಟವನಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಹೈಕಮಾಂಡ್ ತಮ್ಮನ್ನು ಕರೆಸಿಕೊಂಡು ಅಭಿಪ್ರಾಯ ಕೇಳಿತ್ತು. ಆ ಮೂಲಕ ತಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಹಿರಿಯ ನಾಯಕರೊಂದಿಗೆ ನಡೆಸಿದ ಮಾತುಕತೆ ಕೇವಲ ಔಪಚಾರಿಕವಾಗಿತ್ತೇ ವಿನಃ ಅದಕ್ಕೆ ರಾಜಕೀಯ ಬಣ್ಣ ಲೇಪಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಜನತಾ ಪರಿವಾರ ಒಗ್ಗೂಡುವಿಕೆಯ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನತಾ ಪರಿವಾರ ಮತ್ತೆ ಒಂದುಗೂಡುವುದು ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ವರ್ಗಾವಣೆ ದಂಧೆಯಲ್ಲಿ ಮುಖ್ಯಮಂತ್ರಿಗಳು ಕಾಲ ಕಳೆಯುತ್ತಿದ್ದಾರೆ. ಘೋಷಿಸಿದ ಯಾವುದೇ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಂಗೂಲಿ ನಿವೃತ್ತಿ ಸೂಕ್ತ ನಿರ್ಧಾರ: ಶ್ರೀಕಾಂತ್
ಗೌಡರ ಬಲಗೈ ಬಂಟ ಮೇರಾಜುದ್ದೀನ್
ಗೋಕರ್ಣ ಹಸ್ತಾಂತರ: ಸರ್ಕಾರಕ್ಕೆ ನೋಟಿಸ್
ಮೆರಾಜುದ್ದೀನ್ ಪಟೇಲ್ ಇಂದು ಅಂತ್ಯಕ್ರಿಯೆ
ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ನಿಧನ
ಅ.31: 3 ವಿಧಾನಸಭಾ ಕ್ಷೇತ್ರದ ಚುನಾವಣೆ