ಸಂಘ ಪರಿವಾರದ ಅಜೆಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಸಕರ ಸಂಖ್ಯಾ ಬಲವೇ ಪ್ರಮುಖವಾಗಿದ್ದರೆ ಕೂಡಲೇ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲಿ ಎಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯವನ್ನು ನಡೆಸಿಲ್ಲ. ಬದಲಾಗಿ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯ ಬಿಜೆಪಿ ಘಟಕದಲ್ಲಿ ಗುಂಪುಗಾರಿಕೆ ಕಾಣಿಸಿಕೊಂಡಿದ್ದು, ಮುಖ್ಯಮಂತ್ರಿಗಳನ್ನೇ ಅಧಿಕಾರದಿಂದ ಕೆಳಗಿಳಿಸುವ ತಂತ್ರ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಜೆಡಿಎಸ್ ಜೊತೆಗೆ ಚುನಾವಣಾ ಮೈತ್ರಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧರ್ಮಸಿಂಗ್, ಜಾತ್ಯತೀತ ಮತಗಳು ಒಂದಾಗಿ ಕೋಮು ಪಕ್ಷವನ್ನು ಸೋಲಿಸಲು ಅನುಕೂಲವಾಗುತ್ತದೆ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದರು. |