ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿರುವ ಸ್ಥಾನಕ್ಕೆ ಶೀಘ್ರವೇ ನೂತನ ಅಧ್ಯಕ್ಷರನ್ನು ನೇಮಕ ಮಾಡಲು ಜೆಡಿಎಸ್ ಸಿದ್ಧತೆ ನಡೆಸಿದೆ.
ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಚಾಲನೆ ಕೊಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಒಂದೆಡೆ ರಾಜ್ಯಾಧ್ಯಕ್ಷರ ಅಗಲಿಕೆಯ ನೋವು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಕಾಡಿದರೂ, ಸಾರಥಿಯ ಅಗತ್ಯ ಪಕ್ಷಕ್ಕಿದೆ. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಿರುವ ಜೆಡಿಎಸ್ ಶೀಘ್ರವೇ ನೇಮಕ ಮಾಡುವ ಸಾಧ್ಯತೆಗಳಿವೆ.
ಈ ನಡುವೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ಜೆಡಿಎಸ್ ಗೊಂದಲದಲ್ಲಿದೆ. ವಿಧಾನಪರಿಷತ್ ಸದಸ್ಯ ವೈ.ಎಸ್.ವಿ ದತ್ತ, ಹಾಗೂ ಕಾರ್ಯಾಧ್ಯಕ್ಷ ಸಿ. ನಾರಾಯಣ ಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿದ್ದರೂ, ಪಕ್ಷದ ವರಿಷ್ಠ ದೇವೇಗೌಡರು ಯಾರನ್ನು ಆಯ್ಕೆ ಮಾಡುತ್ತಾರೋ ಕಾದು ನೋಡಬೇಕಿದೆ. |