ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಕೇಸು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಕೇಸು
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸುಳ್ಳು ಆಸ್ತಿ ವಿವರ ಮತ್ತು ಪ್ರಮಾಣ ಪತ್ರ ಸಲ್ಲಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ್ ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯ ಚುನಾವಣಾ ಆಯೋಗವು ಸೂಚನೆ ನೀಡಿದೆ.

ಈ ಸಂಬಂಧ ಸಿಆರ್ ಪಿಸಿ ಸೆಕ್ಷನ್ 195ರ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಕಾರವಾರ ಉಪಚುನಾವಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ಆಯೋಗದ ಉನ್ನತ ಮೂಲಗಳು ತಿಳಿಸಿವೆ.

ಒಂದು ವೇಳೆ ಈ ಆರೋಪ ಸಾಬೀತಾದಲ್ಲಿ ಸಚಿವ ಆನಂದ್ ಅಸ್ನೋಟಿಕರ್ ಅವರಿಗೆ ಜೈಲುವಾಸ ಶಿಕ್ಷೆಯ ಜತೆಗೆ, ಮುಂದಿನ ಆರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಜಾರಿಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಈ ನಡುವೆ ಕಾರವಾರದ ದಿಲೀಪ್ ಎಂಬವರ ಕೊಲೆ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ, 2004ರಲ್ಲಿ ನಡೆದ ದಿಲೀಪ್ ಅರ್ಜುನ್ ನಾಯಕ್ ಕೊಲೆ ಪ್ರಕರಣದಲ್ಲಿ ಸಚಿವ ಆನಂದ್ ಅಸ್ನೋಟಿಕರ್ ಹಾಗೂ ಅವರ ತಾಯಿ ವಿಧಾನಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ಆಪಾದಿತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಠಕ್ಕೆ ನೆರವು ನೀಡಿದರೆ ತಪ್ಪೇನು: ಯಡಿಯೂರಪ್ಪ
ಕೆಪಿಸಿಸಿ ಪುನರ್ ರಚನೆ ಅಧ್ಯಕ್ಷರಿಗೆ ಸವಾಲು
ಶೀಘ್ರವೇ ನೂತನ ಅಧ್ಯಕ್ಷರ ನೇಮಕ:ಜೆಡಿಎಸ್
ವಿಧಾನಸಭೆ ವಿಸರ್ಜನೆಗೆ ಧರಂ ಸವಾಲ್
ಲೋಕಸಭೆ ಚುನಾವಣೆ:ಎಸ್ಪಿ-ಕಾಂಗ್ರೆಸ್ ಮೈತ್ರಿ
ಕೋಮುವಾದಿ ಸಂಘಟನೆ ನಿಷೇಧಿಸಬೇಕು:ಖಾನ್