ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೈತ್ರಿ ಮಾಡಲು ಜೆಡಿಎಸ್ ಹೆಬ್ಬಾಗಿಲು ತೆರಿದಿದೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುವಾದಿ ಪಕ್ಷಗಳನ್ನು ಸೋಲಿಸುವ ನಿಟ್ಟಿನಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡಬೇಕೆಂದು ಕರೆ ನೀಡಿದರು.
ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಜೊತೆ ಮೈತ್ರಿ ಕುರಿತು ಶೀಘ್ರದಲ್ಲಿ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಒಂದು ವೇಳೆ ಕಾಂಗ್ರೆಸ್ ಮೈತ್ರಿಗೆ ಮುಂದಾಗದಿದ್ದರೆ ವಿಧಾನಸಭಾ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಡಿಸಿದ್ದಾರೆ. |