ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಕೂಡ ಮೈತ್ರಿಗೆ ಮುಂದಾಗಿದೆ.
ನಗರಕ್ಕೆ ಭಾನುವಾರಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಕ್ತ ಮನಸ್ಸು ಹೊಂದಿದೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ದೇಶಪಾಂಡೆ, ರಾಜ್ಯದಲ್ಲಿ ಭಯೋತ್ಪಾದನೆ ನಿಗ್ರಹಿಸುವಲ್ಲಿ ರಾಜ್ಯ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. |