ಹಾಲಿನ ದರ ಏರಿಕೆ ವಿವಾದದ ಕುರಿತು ಸರ್ಕಾರ ತನಿಖೆ ನಡೆಸಿದರೆ ಹೆದರುವುದಿಲ್ಲ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ.
ಅವರು ಭಾನುವಾರ ಜಿಲ್ಲೆಯ ಮಧುಗಿರಿಗೆ ಭೇಟಿ ನೀಡಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಿಕೊಂಡಿರುವುದು ಸರಿಯಲ್ಲ ಎಂದು ದೂರಿದ ಅವರು, ಟೊನ್ಡ್ ಹಾಲಿನ ದರ ಹೆಚ್ಚಿಸುವ ಕುರಿತು ಮಂಡಳಿ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಆಪರೇಷನ್ ಕಮಲದ ವಿರುದ್ಧ ಹರಿಹಾಯ್ದ ರೇವಣ್ಣ, ಬಿಜೆಪಿ ನಡೆಸಿರುವ ಆಪರೇಷನ್ ಕಮಲಕ್ಕೆ ಜನರಿಂದಲೇ ಪ್ರತ್ಯುತ್ತರ ದೊರೆಯಲಿದ್ದು, ಮುಂದಿನ ವಿಧಾನಸಭಾ ಉಪಚುನಾವಣೆಯಲ್ಲಿ ಜನತೆಯೇ ಬಿಜೆಪಿಗೆ ಆಪರೇಷನ್ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷರ ನೇಮಕದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಧ್ಯದಲ್ಲಿಯೇ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. |