ಕೋಲಾರ ಜಿಲ್ಲೆಯ ಮುಳಬಾಗಿಲಿನ ಹನುಮೇನಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೆನ್ನೈ-ಬೆಂಗಳೂರಿಗೆ ತೆರಳುತ್ತಿದ್ದ ವೋಲ್ವೋ ಬಸ್ ಮತ್ತು ತಿರುಪತಿ-ಬೆಂಗಳೂರು ಸಂಚಾರದ ಕೆಎಸ್‌ಆರ್‌ಟಿಸಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದರೂ ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದೇ ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಸ್ಥಳೀಯ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಶೀಲನೆ ನಡೆಸಿದರು.
2.5 ಲಕ್ಷ ಪರಿಹಾರ : ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ತಲಾ 2.5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 15 ಸಾವಿರ, ಸಣ್ಣ-ಪುಟ್ಟ ಗಾಯಾಳುಗಳಿಗೆ ರೂ.5ಸಾವಿರ ರೂ. ನೀಡುವುದಾಗಿ ಘೋಷಿಸಿದೆ. |