ಒಂಭತ್ತು ಜನ ಶಂಕಿತ ಉಗ್ರರ ವಿಚಾರಣೆಯನ್ನು ಮಂಗಳವಾರ ಇಲ್ಲಿನ ಜಿಲ್ಲೆಯ ಒಂದನೇ ಸತ್ರ ನ್ಯಾಯಾಲಯದಲ್ಲಿ ನಡೆಸಿದ್ದು,ವಿಚಾರಣೆಯನ್ನು ನ.18ಕ್ಕೆ ಮುಂದೂಡಿದೆ.
ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬೋಪಯ್ಯ ಅವರು ಶಂಕಿತ ಉಗ್ರರ ಪರ ವಕೀಲರ ವಾದವನ್ನು ಆಲಿಸಿದರು. ಶಂಕಿತ ಉಗ್ರರನ್ನು ಆರೋಪ ಮುಕ್ತರನ್ನಾಗಿಸಬೇಕೆಂದು ನ್ಯಾಯಾಲಯದಲ್ಲಿ ಉಗ್ರರ ಪರ ವಕೀಲರು ಮನವಿ ಮಾಡಿದರು.ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದಿನ ತಿಂಗಳ 18ಕ್ಕೆ ಮುಂದೂಡಿದ್ದಾರೆ.
ಬೆಂಗಳೂರು ವರದಿ: ಮಂಗಳೂರಿನಲ್ಲಿ ಬಂಧಿಸಲಾಗಿರುವ ಇಬ್ಬರು ಶಂಕಿತ ಉಗ್ರರಿಗೆ ಬ್ರೈನ್ ಮ್ಯಾಪಿಂಗ್ ನಡೆಸಲಾಗಿದೆ. ವಿವಿಧೆಡೆಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಗಾಗಿ ಬ್ರೈನ್ ಮ್ಯಾಪಿಂಗ್ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |