ರಾಜ್ಯದಲ್ಲಿ ಚರ್ಚ್ ಮೇಲಿನ ದಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜಭವನಕ್ಕೆ ತೆರಳಿದ ಗೃಹ ಸಚಿವರು ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರೊಂದಿಗೆ ದಾಳಿ ಕುರಿತು ಚರ್ಚೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಫಾದರ್ ಅಡಲ್ಫಾ ನೇತೃತ್ವ ನಿಯೋಗವೊಂದು ಗೃಹ ಸಚಿವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ. ಸರ್ಕಾರದ ಬಿಗಿ ಭದ್ರತೆಯ ನಡುವೆಯೂ ಚರ್ಚ್ ಮೇಲೆ ದಾಳಿ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಮೂಲಕ ಕ್ರೈಸ್ತರು ರಾಜ್ಯದಲ್ಲಿ ಅಭದ್ರತೆಯ ನಡುವೆ ಬದುಕಬೇಕಾದ ಸ್ಥಿತಿ ಎದುರಾಗಿದೆ ಎಂದು ತಿಳಿಸಿರುವ ನಿಯೋಗ, ಈ ಕುರಿತು ಕ್ರೈಸ್ತ ಸಮುದಾಯಕ್ಕೆ ಸೂಕ್ತ ಭದ್ರತೆ ಕಲ್ಪಿಸುವಂತೆ ಗೃಹ ಸಚಿವರಿಗೆ ಮನವಿ ಮಾಡಿದೆ. |