ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚರ್ಚ್ ದಾಳಿ ಹಿಂದೆ ಕೋಮುವಾದಿಗಳು:ಡಿಕೆಶಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚರ್ಚ್ ದಾಳಿ ಹಿಂದೆ ಕೋಮುವಾದಿಗಳು:ಡಿಕೆಶಿ
ರಾಜ್ಯದಲ್ಲಿ ನಡೆಯುತ್ತಿರುವ ಚರ್ಚ್ ಮೇಲಿನ ದಾಳಿಯಲ್ಲಿ ಕೋಮುವಾದಿ ಶಕ್ತಿಗಳ ಕೈವಾಡವಿದೆ ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಅಗ್ನಿಗಾಹುತಿಯಾಗಿರುವ ಆನೇಕಲ್ ಬಳಿಯ ಚರ್ಚ್‌‌ಗೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ರಕ್ಷಣೆಯಿಲ್ಲದೆ ಭಯದಿಂದ ಬದುಕುವಂತಾಗಿದೆ.

ಚರ್ಚ್‌‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು ಚರ್ಚ್ ಮೇಲೆ ಮತ್ತೆ ಮತ್ತೆ ದಾಳಿ ನಡೆಯಲು ಕಾರಣವಾಗಿದೆ ಎಂದು ದೂರಿದರು.

ಪೊಲೀಸರ ಮೇಲೆ ಒತ್ತಡ:ರಾಜ್ಯ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಸುಳ್ಳು ಹೇಳುವಂತೆ ಪ್ರೇರೇಪಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಡಿಕೆಶಿ, ಇದರಿಂದ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆಯಿಲ್ಲ ಎಂಬುದು ಮತ್ತೊಮೆ ಸಾಬೀತಾಗಿದೆ. ಬಜರಂಗ ದಳದ ಒಬ್ಬರನ್ನು ಬಂಧಿಸಿದರೆ ಸಾಲದು, ಬದಲಾಗಿ ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಶಿವಕುಮಾರ್ ಒತ್ತಾಯಿಸಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಮುಖಂಡ ಬಿ.ಗೋಪಾಲ್, ಶಿವಣ್ಣ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ. ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚರ್ಚ್ ದಾಳಿ: ಪಾಟೀಲ್-ಠಾಕೂರ್ ಚರ್ಚೆ
ಉಪಚುನಾವಣೆಗೆ ಆಸ್ನೋಟಿಕರ್‌‌ ಅಭ್ಯರ್ಥಿ:ಧನಂಜಯ್
ಶಂಕಿತ ಉಗ್ರರ ವಿಚಾರಣೆ ನ.18ಕ್ಕೆ ಮುಂದೂಡಿಕೆ
ಉಡುಪಿಯಲ್ಲಿ ಕನಕ ಗೋಪುರವೇ ಇಲ್ಲ:ಈಶ್ವರಪ್ಪ
ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಜಯ: ಯಡಿಯೂರಪ್ಪ
ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ