ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಸಮನಾದ ಸೀಟು ಹೊಂದಾಣಿಕೆಗೆ ಕಾಂಗ್ರೆಸ್- ಜೆಡಿಎಸ್ ಮುಂದಾಗಿದೆ.
ಎರಡೂ ಪಕ್ಷಗಳ ರಾಜ್ಯ ಮುಖಂಡರು ತಲಾ ನಾಲ್ಕು ಸ್ಥಾನ ಹಂಚಿಕೊಳ್ಳಲು ತೀರ್ಮಾನಿಸಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ನಾಲ್ಕು ಸ್ಥಾನಗಳನ್ನು ಜೆಡಿಎಸ್ ಬಿಟ್ಟು ಕೊಡಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಅಲ್ಲದೆ, ಉತ್ತರ ಕರ್ನಾಟಕದ 4 ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಜೆಡಿಎಸ್ ಸಮ್ಮತಿಸಿದೆ.
ಇದರಂತೆ ಮದ್ದೂರು, ದೊಡ್ಡಬಳ್ಳಾಪುರ, ತುರುವೇಕೆರೆ ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಮ್ಮತಿಸಿದ್ದರೆ, ಕಾರವಾರ, ಹುಕ್ಕೇರಿ, ಅರಬಾವಿ ಹಾಗೂ ದೇವದುರ್ಗ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಜೆಡಿಎಸ್ ಹಸಿರು ನಿಶಾನೆ ತೋರಿಸಿದೆ ಎಂದು ತಿಳಿದು ಬಂದಿದೆ. ಆದರೆ ಯಾವುದು ಅಂತಿಮಗೊಂಡಿಲ್ಲ.
ಹೊಂದಾಣಿಕೆ ವಿವರವನ್ನು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಲಾಗಿದ್ದು, ಹೈಕಮಾಂಡ್ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. |