ತಮಟೆ ಗಣಿ ಪ್ರವೇಶ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಿತ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದನ್ನು ವಿರೋಧಿಸಿ ಬುಧವಾರ ಮಾಜಿ ಸಚಿವ ದಿವಾಕರ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಘರ್ಷಣೆ ಏರ್ಪಟ್ಟ ಹಿನ್ನೆಲೆಯಲ್ಲಿ ದಿವಾಕರ ಬಾಬು ಸೇರಿದಂತೆ ಆರು ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಟಿಎನ್ ಆರ್ ಕಂಪೆನಿಗೆ ಗಣಿಗಾರಿಕೆ ನಡೆಸಲು ನೀಡಿರುವ ಅವಕಾಶಗಳ ನೀಡಿರುವುದನ್ನು ಖಂಡಿಸಿ ಮಾಜಿ ಸಚಿವ ದಿವಕಾರ್ ಬಾಬು ನೇತೃತ್ವದಲ್ಲಿ ಅರಣ್ಯಾಧಿಕಾರಿ ಕಚೇರಿ ಎದುರು ಬುಧವಾರ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಿ, ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಒಲೈಸಲು ಪೊಲೀಸರು ಪ್ರಯತ್ನಿಸಿದರಾದರೂ, ಪ್ರತಿಭಟನೆ ತೀವ್ರ ಸ್ವರೂಪ ಪಡೆಯತೊಡಗಿದೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.
ಅಲ್ಲದೆ, ದಿವಾಕರ್ ಬಾಬು ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಈ ಗಣಿಗಾರಿಕೆ ನಡೆಸಲಾಗುತ್ತಿದೆ. ಈ ಕುರಿತು ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ. |