ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನಕಗೋಪುರ ಹೇಳಿಕೆಗೆ ಬದ್ಧ: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನಕಗೋಪುರ ಹೇಳಿಕೆಗೆ ಬದ್ಧ: ಈಶ್ವರಪ್ಪ
ಉಡುಪಿ ಕನಕಗೋಪುರ ಕುರಿತು ಹೇಳಿಕೆಗೆ ಈಗಲೂ ಬದ್ದ ಎಂದಿರುವ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ, ಕನಕಪುರಗೋಪುರ ವಿಚಾರವನ್ನು ರಾಜಕೀಯ ದುರುಪಯೋಗಕ್ಕಾಗಿ ಬಳಸಿಕೊಳ್ಳಬಾರದೆಂದು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಗೋಪುರ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ. ಇದು ನನ್ನ ವೈಯಕ್ತಿಕ ಹೇಳಿಕೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದೆಂದು ತಿಳಿಸಿದ್ದಾರೆ.

ಈ ಹೇಳಿಕೆಯ ಮೂಲಕ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವುದು ತಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸತ್ಯಾಂಶ ಯಾವುದು ಎಂಬ ಬಗ್ಗೆ ಜನತೆ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ವಿದ್ಯುತ್ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡಿದೆ ಎಂದು ತಿಳಿಸಿದ್ದಾರೆ.

ಕೇಂದ್ರದಿಂದ 150 ಮೆಗಾವ್ಯಾಟ್ ವಿದ್ಯುತ್ ರವಾನೆಯಾಗುತ್ತಿದ್ದು, ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಶೇಖರಣೆ ಮಾಡಲಾಗಿದೆ ಎಂದು ಅವರು ವಿವರಣೆ ನೀಡಿದರು.

ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಶೇಖರಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಕಂಡು ಬರುತ್ತಿಲ್ಲ ಎಂದು ತಿಳಿಸಿದ ಅವರು, ವಿದ್ಯುತ್ ಕಡಿತ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ನೇಣಿಗೆ ಶರಣು
ಗಣಿವಿವಾದ: ದಿವಾಕರ ಬಾಬು ಮತ್ತೆ ಬಂಧನ
ಸಿದ್ದಗಂಗಾ ಶ್ರೀಗಳಿಗೆ ಬೆದರಿಕೆ ಪತ್ರ
ನಾನು ಸಮಾಜವಾದಿ: ಅನಂತಮೂರ್ತಿ
1ನೆ ತರಗತಿಗೆ ಹೊಸ ಇಂಗ್ಲಿಷ್ ಪಠ್ಯ: ಕಾಗೇರಿ
ಕೆಪಿಎಸ್‌ಸಿ ಅವ್ಯವಹಾರ: ಸಿಬಿಐ ತನಿಖೆಗೆ ಅರ್ಜಿ