ಹಾಲಿನ ದರ ಏರಿಕೆ ಮಾಡಬಾರದೆಂಬ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಪ್ರಕ್ರಿಯೆ ಕುರಿತಂತೆ ಕೆಎಂಎಫ್ ಅಧ್ಯಕ್ಷ ಎಚ್.ಡಿ. ರೇವಣ್ಣ ಹಾಗೂ ಹಾಲು ಉತ್ಪಾದಕರ ಒಕ್ಕೂಟದ ವಿವಿಧ 13 ಅಧ್ಯಕ್ಷರುಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಕೆಎಂಎಫ್ ಅಧ್ಯಕ್ಷರುಗಳೊಂದಿಗೆ ಶೀಘ್ರವೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಬೆಲೆ ಏರಿಕೆಗೆ ಸಂಬಂಧ ಪಟ್ಟಂತೆ ಮನವರಿಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ರೈತರಿಗೆ ಸರ್ಕಾರ ವತಿಯಿಂದ ಈಗಾಗಲೇ 2 ರೂ. ಸಹಾಯ ಧನವನ್ನು ನೀಡುತ್ತಿದ್ದು, ಕೆಎಂಎಫ್ ಬೆಲೆ ಏರಿಕೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ಅವರು, ಇದರಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. |