ಮುಂದಿನ ಉಪಚುನಾವಣೆಯಲ್ಲಿ ಪ್ರತಿಷ್ಠೆಯನ್ನು ಬದಿಗೊತ್ತಿ ಆಡಳಿತರೂಢ ಬಿಜೆಪಿಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಮೈತ್ರಿಗೆ ಮುಂದಾಗಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರಕ್ಕೆ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದು, 5:3 ಅನುಪಾತದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕುರಿತು ನಾಯಕರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದು ಅವರು ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದ್ದು, ಐಎಎಸ್ ಹಾಗೂ ಐಪಿಎಸ್ ವರ್ಗಾವಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಅಲ್ಲದೆ, ನಿಗಮ ಮಂಡಳಿ ನೇಮಕಾತಿಯಲ್ಲೂ ಅವ್ಯವಹಾರ ನಡೆದಿದ್ದು, ಸರ್ಕಾರಕ್ಕೆ ಅಭಿವೃದ್ಧಿಗಿಂತ ಧೇಣಿಗೆ ಮುಖ್ಯವಾಗಿದೆ ಎಂದು ದೂರಿದ್ದಾರೆ. |