ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದಗಂಗಾಶ್ರೀಗೆ ಭಾರತ ರತ್ನ:ಸಚಿವ ಸಂಪುಟ ಶಿಫಾರಸು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದಗಂಗಾಶ್ರೀಗೆ ಭಾರತ ರತ್ನ:ಸಚಿವ ಸಂಪುಟ ಶಿಫಾರಸು
NRB
ಸಿದ್ದಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ್ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಶಿಫಾರಸು ಮಾಡಲಾಗಿದೆ.

ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ,ಅನ್ನದಾಸೋಹ ನೀಡುತ್ತಿರುವ ಹಿರಿಯ ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಅಲ್ಲದೇ ಇಂದು ನಡೆದ ಸಂಪುಟ ಸಭೆಯಲ್ಲಿ ಗಾನಗಂಧರ್ವ ಪುಟ್ಟರಾಜು ಗವಾಯಿ, ಜಿ.ಎಸ್.ಅಶ್ವಥ್ ಸೇರಿದಂತೆ 16 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಶಿಫಾರಸು ಮಾಡಲಾಗಿದೆ ಎಂದು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬೆಳಗಾವಿಯಲ್ಲಿ ವಿಶ್ವಕನ್ನಡ ಸಮ್ಮೇಳನ ನಡೆಯುವ ಮುನ್ನವೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರತಿಷ್ಠೆ ಬದಿಗೊತ್ತಿ ಮೈತ್ರಿ: ಕುಮಾರಸ್ವಾಮಿ
ಕನ್ನಡ ನಾಮಫಲಕ ಹಾಕದಿದ್ದರೆ ದಂಡ:ಚಂದ್ರು
ಭಾಗ್ಯಲಕ್ಷ್ಮಿ ಯೋಜನೆ ತನಿಖೆಗೆ ಕೇಂದ್ರಕ್ಕೆ ಪತ್ರ: ಸಿಎಂ
ಅ.28ರವರೆಗೆ ದಿವಾಕರ ಬಾಬು ನ್ಯಾಯಾಂಗ ಬಂಧನಕ್ಕೆ
ಬಿಬಿಎಂಪಿ ಚುನಾವಣೆ: ಸರ್ಕಾರದಿಂದ ಹೈಕೋರ್ಟ್‌ಗೆ ಅರ್ಜಿ
ಹಾಲಿನ ದರ-ಸರ್ಕಾರದ ನಿಲುವು ದೃಢ: ಸವದಿ