ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ:ಖರ್ಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ:ಖರ್ಗೆ
ರಾಜ್ಯದಲ್ಲಿ ಚರ್ಚ್‌‌ಗಳ ಮೇಲೆ ಅವ್ಯಾಹತವಾಗಿ ದಾಳಿ ನಡೆಯುತ್ತಿದ್ದರೂ, ಸೂಕ್ತ ಭದ್ರತೆ ಒದಗಿಸದ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಆನೇಕಲ್ ತಾಲ್ಲೂಕಿನ ಯಡವನಹಳ್ಳಿ ಸೈಂಟ್ ಆಂಥೋನಿ ಚರ್ಚ್‌‌ಗೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ನಿರಂತರವಾಗಿ ಚರ್ಚ್ ಮೇಲೆ ದಾಳಿ ನಡೆಯುತ್ತಿದ್ದರೂ, ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಈ ಕುರಿತು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದರೂ, ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ, ಅಲ್ಪಸಂಖ್ಯಾತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲದಿರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದ ಕುರಿತು ಹಾಲಿ ನ್ಯಾಯಾಧೀಶರಿಂದ ಸಿಬಿಐ ತನಿಖೆ ನಡೆಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಸರ್ಕಾರವನ್ನು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯೋತ್ಸವ ಪ್ರಶಸ್ತಿ ನೀಡಿ:ಹೊಟೇಲ್ ಉದ್ಯಮಿದಾರರು
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ
ಸಿದ್ದಗಂಗಾಶ್ರೀಗೆ ಭಾರತ ರತ್ನ:ಸಚಿವ ಸಂಪುಟ ಶಿಫಾರಸು
ಪ್ರತಿಷ್ಠೆ ಬದಿಗೊತ್ತಿ ಮೈತ್ರಿ: ಕುಮಾರಸ್ವಾಮಿ
ಕನ್ನಡ ನಾಮಫಲಕ ಹಾಕದಿದ್ದರೆ ದಂಡ:ಚಂದ್ರು
ಭಾಗ್ಯಲಕ್ಷ್ಮಿ ಯೋಜನೆ ತನಿಖೆಗೆ ಕೇಂದ್ರಕ್ಕೆ ಪತ್ರ: ಸಿಎಂ