ಕನ್ನಡ ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನದೊಳಗಾಗಿ ಸ್ಪಷ್ಟಪಡಿಸದಿದ್ದರೆ ಹೋರಾಟ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಲಿಲ್ಲವೆಂಬ ಕೊರಗು ಕನ್ನಡಿಗರಲ್ಲಿದೆ. ಆದರೆ ಕೇಂದ್ರ ಸರ್ಕಾರ ಕನ್ನಡಿಗರ ಅಭಿಲಾಷೆಯನ್ನು ನಿರ್ಲಕ್ಷಿಸಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಒಂದು ವೇಳೆ ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದೊಳಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಅನಿವಾರ್ಯ. ಅದಕ್ಕೆ ಅವಕಾಶ ನೀಡದೆ ಕನ್ನಡಕ್ಕೆ ಶೀಘ್ರ ಶಾಸ್ತ್ರೀಯ ಸ್ಥಾನಮಾನ ನೀಡಲು ಆಗ್ರಹಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಹಣ ಮೀಸಲಿಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |