ರಾಜ್ಯದ ವಿವಿಧೆಡೆ ನಡೆದ ಚರ್ಚ್ ದಾಳಿಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಬಜರಂಗದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿರುವ ಕ್ರಮವನ್ನು ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಇದೇ ಪ್ರಕರಣದಲ್ಲಿ ಮಹೇಂದ್ರ ಕುಮಾರ್ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಕಳೆದ ಸೆಪ್ಟೆಂಬರ್ 19ರಂದು ಬಂಧಿಸಲಾಗಿತ್ತು. ಇವರ ವಿರುದ್ಧ ವಿವಿಧ ಕೋರ್ಟ್‌ಗಳಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ಒಂದು ಪ್ರಕರಣದಲ್ಲಿ ಮಹೇಂದ್ರ ಅವರಿಗೆ ಮಂಗಳೂರಿನ ಕೋರ್ಟ್ ಜಾಮೀನು ನೀಡಿದೆ. ಆದರೆ ಇನ್ನೊಂದು ಪ್ರಕರಣದಲ್ಲಿ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ. |