ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ ನಿರ್ಧಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ ನಿರ್ಧಾರ
ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಅ.31ರಂದು ನಡೆಯಲಿರುವ ಉಪ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಜೆಡಿಎಸ್ ನಿರ್ಧರಿಸಿದೆ ಎಂದು ಪಕ್ಷದ ವಕ್ತಾರ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಈಗಾಗಲೇ ನಾಮಪತ್ರ ಸಲ್ಲಿಸಿರುವ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಶುಕ್ರವಾರ ಮಧ್ನಾಹ್ನ 3ಗಂಟೆ ಒಳಗೆ ನಾಮಪತ್ರ ಹಿಂತೆಗೆದುಕೊಳ್ಳಲು ಸೂಚಿಸಲಾಗಿದೆ.

ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸುವ ಉದ್ದೇಶದಿಂದ ಜಾತ್ಯತೀತ ಮತಗಳು ಹಂಚಿ ಹೋಗುವುದನ್ನು ತಪ್ಪಿಸಬೇಕು ಎಂಬ ಕಾರಣಕ್ಕಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪರಸ್ಪರ ಮಾತನಾಡಿದ ನಂತರ ನಮ್ಮ ಪಕ್ಷದ ವರಿಷ್ಠ ನಾಯಕರೆಲ್ಲ ಸಮಾಲೋಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಳಗಾವಿ, ಕೊಡಗು ಮತ್ತು ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜಾಮೀನಿಗಾಗಿ ಮಹೇಂದ್ರಕುಮಾರ್ ಹೈಕೋರ್ಟ್ ಮೊರೆ
ಚುನಾವಣೆ: ಬಿಜೆಪಿ ಶಾಸಕಾಂಗ ಸಭೆ
ಶಾಸ್ತ್ರೀಯ ಭಾಷೆ:ಪ್ರತಿಭಟನೆಗೆ ಸಿಎಂ ಕರೆ
ಚರ್ಚ್‌ಗೆ ಬೆಂಕಿ:ಮಾಹಿತಿ ನೀಡಿದರೆ 10ಲಕ್ಷ:ಸಾಂಗ್ಲಿಯಾನ
ಗಣಿ ವಿವಾದ ಪ್ರತಿಕ್ರಿಯೆಗೆ ರೆಡ್ಡಿ ನಕಾರ
ಗೋಕರ್ಣ ಆಸ್ತಿ ಪರಭಾರೆಗೆ ಹೈಕೋರ್ಟ್ ತಡೆ