ಮೇಲುಕೋಟೆಯಿಂದ ಮಂಡ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್‌ವೊಂದು ವೇಗವಾಗಿ ಚಲಿಸಿ ನಿಯಂತ್ರಣ ತಪ್ಪಿ ಗದ್ದುಗೆ ಉರುಳಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಈ ಖಾಸಗಿ ಬಸ್‌ನಲ್ಲಿ ನೂರೈವತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದಿದ್ದರು. ಚಾಲಕ ಅತಿ ವೇಗವಾಗಿ ಚಲಿಸಿದ ಪರಿಣಾಮ ಬಸ್ ಗದ್ದಗೆ ಉರುಳಿ ಬಿದ್ದ ಪರಿಣಾಮ ಈ ಭೀಕರ ದುರ್ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಪಘಾತದಲ್ಲಿ ಆರು ಪ್ರಯಾಣಿಕರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯರು ನೆರವು ನೀಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. |