ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಯಿಂದ ದ್ವೇಷದ ರಾಜಕಾರಣ: ಶಂಕರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಯಿಂದ ದ್ವೇಷದ ರಾಜಕಾರಣ: ಶಂಕರ್
ರಾಜ್ಯದಲ್ಲಿನ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತ ವಿರೋಧ ಪಕ್ಷಗಳ ಮೇಲೆ ಹರಿಹಾಯುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ವಕ್ತಾರ ಬಿ.ಎಲ್. ಶಂಕರ್ ತಿಳಿಸಿದ್ದಾರೆ.

ದ್ವೇಷ ರಾಜಕಾರಣ ಮಾಡುವ ಮೂಲಕ ವಿರೋಧ ಪಕ್ಷಗಳನ್ನು ಮಟ್ಟ ಹಾಕಬಹುದೆಂದು ಮುಖ್ಯಮಂತ್ರಿಗಳು ಹಾಗೂ ಇತರ ಬಿಜೆಪಿ ಮುಖಂಡರು ಅಂದುಕೊಂಡಿದ್ದರೆ ಅವರಿಗೆ ಭ್ರಮನಿರಸನವಾಗಲಿದೆ ಎಂದು ಅವರು ಶುಕ್ರವಾರ ಪಕ್ಷದ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಅಲ್ಲದೆ, ಬಳ್ಳಾರಿಯಲ್ಲಿ ನಡೆಯುತ್ತಿರುವ ಗಣಿ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ದಿವಾಕರ್ ಬಾಬು ಬಂಧನ ಮತ್ತಿತರ ನಿರ್ಧಾರಗಳು ದ್ವೇಷದ ರಾಜಕಾರಣಕ್ಕೆ ಸ್ಪಷ್ಟ ಉದಾಹರಣೆಗಳಾಗಿವೆ ಎಂದು ಅವರು ದೂರಿದರು.

ಗಡಿಯಲ್ಲಿ ನಡೆಯುತ್ತಿರುವ ಎಲ್ಲಾ ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಿ ಅಕ್ರಮವಾಗಿ ಎಲ್ಲೆಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಅಲ್ಲದೆ, ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಂಜೂರು ಮಾಡಲಾದ ವಿದ್ಯಾಸಂಸ್ಥೆಗಳು ಮತ್ತು ಅವುಗಳ ಸ್ಥಿತಿಗತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮತ್ತೆ ಲಾರಿ ಮುಷ್ಕರ ಬೆದರಿಕೆ
ತಲಕಾವೇರಿಯಲ್ಲಿ 'ಕಾವೇರಿ ದರ್ಶನ'
ಪ್ರಧಾನಿಯಾಗಿದ್ದರೆ ಸರ್ಕಾರ ವಜಾ ಮಾಡುತ್ತಿದ್ದೆ: ಗೌಡ
ಮೈತ್ರಿ ಉಪ ಚುನಾವಣೆಗಷ್ಟೇ ಸೀಮಿತ:ದೇವೇಗೌಡ
ಮಂಡ್ಯ: ಭೀಕರ ಅಪಘಾತಕ್ಕೆ 6 ಬಲಿ
ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ ನಿರ್ಧಾರ