ಬಾಂಗ್ಲಾದೇಶದ ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನವೆಂಬರ್ 12ರಂದು ದೇಶವ್ಯಾಪಿ ಕಾಲೇಜ್ ಬಂದ್‌ಗೆ ಕರೆ ನೀಡಿದೆ.
ಬಾಂಗ್ಲಾದೇಶದಿಂದ ನಿರಂತರವಾಗಿ ಅಕ್ರಮ ನುಸುಳುಕೋರರು ಭಾರತಕ್ಕೆ ಬರುತ್ತಲೇ ಇದ್ದಾರೆ. ಇದರಿಂದ ಭಯೋತ್ಪಾದನೆ ಮತ್ತು ಕೋಮುಗಲಭೆಯಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂತವರನ್ನು ಹೊರಹಾಕುವಮತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುರೇಶ್ ಭಟ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ಸಾಂ, ಪಶ್ಚಿಮ ಬಂಗಾಳ, ಬಿಹಾರ, ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಬಂಡುಕೋರರ ಹಾವಳಿ ಮಿತಿ ಮೀರಿದ್ದು, ಉಗ್ರಗಾಮಿ ಚಟುವಟಿಕೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ದೇಶವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಅವರು ವಿವರಿಸಿದರು.
ಒಂದು ವೇಳೆ ಕೇಂದ್ರ ಸರ್ಕಾರ ಇದೇ ರೀತಿ ಮೃದು ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. |