ಬಿ.ಎಸ್.ಯಡಿಯೂರಪ್ಪ ಸಂಪುಟದ ಸಚಿವರಾದ ಆನಂದ್ ಅಸ್ನೋಟಿಕರ್ ಮತ್ತು ಶಿವನಗೌಡ ನಾಯಕ ಅವರು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವರ್ತೂರು ಪ್ರಕಾಶ್ ಅವರೊಂದಿಗೆ ತೆರಳಿದ ಸಚಿವರು, ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ ಅಸ್ನೋಟಿಕರ್, ಈ ಭೇಟಿಗೆ ಯಾವುದೇ ರಾಜಕೀಯ ಬಣ್ಣ ಲೇಪಿಸುವ ಅಗತ್ಯವಿಲ್ಲ. ಇದೊಂದು ಸೌಹಾರ್ದಯುತ ಮಾತುಕತೆ ಎಂದು ಸ್ಪಷ್ಟಪಡಿಸಿದ್ದಾರೆ.
ಇವರಿಬ್ಬರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದು, ಅವರನ್ನು ಯಡಿಯೂರಪ್ಪ ಸಚಿವರನ್ನಾಗಿ ಸಂಪುಟಕ್ಕೆ ಸೇರಿಸಿಕೊಂಡಿದ್ದರು.ಇದೀಗ ಈ ಇಬ್ಬರು ಸಚಿವರು ಉಪಚುನಾವಣೆಯಲ್ಲಿ ಸ್ಪರ್ಧಿಸಲಿರುವುದರಿಂದ ಈ ಭೇಟಿಗೆ ರಾಜಕೀಯ ಮಹತ್ವ ಪಡೆದಿದೆ. |