ರಾಜ್ಯದ ಎಲ್ಲ ಬಡವರಿಗೂ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ಶೀಘ್ರದಲ್ಲೇ ಸಂಪೂರ್ಣಗೊಳಿಸುವ ಕುರಿತು ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಪಡಿತರ ಚೀಟಿಯಲ್ಲಿ ಆದ ವ್ಯತ್ಯಯ ಸರಿಪಡಿಸುವ ಪ್ರಕ್ರಿಯೆ ನಡೆದಿದ್ದು, ಶೀಘ್ರವೇ ಸರ್ವೇ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ರಾಜ್ಯಾದ್ಯಂತ ಭಾವಚಿತ್ರ ಸಹಿತ ಪಡಿತರ ಚೀಟಿ ಸಿದ್ದಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೇ.70ರಷ್ಟು ಛಾಯಾಗ್ರಹಣ ಕಾರ್ಯ ಮುಗಿದಿದೆ. ಉಳಿದ ಕಾರ್ಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಇನ್ನೊಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಮಂಗಳೂರು, ಉಡುಪಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಶೇ.90ರಷ್ಟು ಛಾಯಾಗ್ರಹಣ ಕಾರ್ಯ ಮುಗಿದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಪ್ರಕಟಿಸಿರುವಂತೆ 3 ಲಕ್ಷ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಾಗೂ 51 ಲಕ್ಷ ಎಪಿಎಲ್ ಕಾರ್ಡ್ ವಿತರಿಸಲಾಗಿದ್ದು, ಇದರಲ್ಲಿ ಸಾಕಷ್ಟು ದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಿಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |