ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಜಿಪುರ ವಸತಿ ಸಮುಚ್ಚಯ ಗುತ್ತಿಗೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇವರಿಕ್ ಸಂಸ್ಥೆಯಿಂದ 50ಕೋಟಿ ರೂಪಾಯಿ ಲಂಚ ಸ್ವೀಕರಿಸಿದ್ದರು ಎಂದು ಕುಮಾರಸ್ವಾಮಿ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.
ಇದೀಗ ಭ್ರಷ್ಟಾಚಾರ ಆರೋಪ ಪ್ರಕರಣ ಕುರಿತು ಕುಮಾರಸ್ವಾಮಿ ಅವರ ಮೇಲೆ ಮಾನಹಾನಿ ಮೊಕದ್ದಮೆ ಹೂಡುವ ನಿಟ್ಟಿನಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನಿವೃತ್ತ ನ್ಯಾಯಾಧೀಶರಾದ ರವಿ.ಪಿ.ನಾಯಕ್ ಅವರನ್ನು ವಿಶೇಷ ಅಭಿಯೋಜನಕರನ್ನಾಗಿ ಸರ್ಕಾರ ನೇಮಕ ಮಾಡಿದೆ.
ಮೊಕದ್ದಮೆ ಹೂಡುವ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರ ಶುಕ್ರವಾರವೇ ಅಧಿಸೂಚನೆ ಹೊರಡಿಸಿದೆ. |