ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾನನಷ್ಟ ಮೊಕದ್ದಮೆ ಸ್ವಾಗತಿಸುತ್ತೇನೆ: ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾನನಷ್ಟ ಮೊಕದ್ದಮೆ ಸ್ವಾಗತಿಸುತ್ತೇನೆ: ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಡಿರುವ ಆರೋಪಗಳಿಗೆ ನನ್ನ ಬಳಿ ಅಗತ್ಯ ಸಾಕ್ಷ್ಯಾಧಾರಗಳಿವೆ. ಆದ್ದರಿಂದ ಯಾವ ಬೆದರಿಕೆಗೂ ಹೆದರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮೇವರಿಕ್ ಹೋಲ್ಡಿಂಗ್ಸ್‌‌ಗೆ ನೀಡಿರುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿರುವುದು ನಿಜ. ಇದನ್ನು ಬಹಿರಂಗವಾಗಿ ಪ್ರಸ್ತಾಪಿಸಿದರೆ ಅದು ಮಾನನಷ್ಟವಾಗುತ್ತದೆಯೇ? ಎಂದು ಕುಹಕವಾಡಿದರು. ಇಂತಹ ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದರು.

ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಕರಕಾರ ವಿಶೇಷ ಅಭಿಯೋಜಕರನ್ನು ನೇಮಿಸಿರುವುದನ್ನು ಸ್ವಾಗತಿಸುತ್ತೇನೆ. ಈ ದಿಸೆಯಲ್ಲಿ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದರು.

ಯಡಿಯೂರಪ್ಪ ಅಧಿಕಾರಕ್ಕೆ ಬಂದ ದಿನದಿಂದಲೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.ಅಧಿಕಾರ ಕೈಯಲ್ಲಿದ್ದರೆ ಏನು ಬೇಕಾದರೂ ಮಾಡಬಹುದು ಎಂಬ ಭ್ರಮೆಯಲ್ಲಿ ಯಡಿಯೂರಪ್ಪ ಇದ್ದಂತಿದೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಶಾಸಕರ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗದಂತೆ ಮುಖ್ಯಮಂತ್ರಿ ನೋಡಿಕೊಳ್ಳುವ ಮೂಲಕ ಪ್ರತಿಪಕ್ಷದವರನ್ನು ಹದ್ದುಬಸ್ತಿನಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಅವರಿಂದ ಸಾಧ್ಯವಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೊಗೇನಕಲ್: ಕೇಂದ್ರದ ಮಧ್ಯಸ್ಥಿಕೆಗೆ ಸಿಎಂ ಸ್ವಾಗತ
ಬಳ್ಳಾರಿ ಆಡಳಿತ ರೆಡ್ಡಿಗಳಿಗೆ ಹೊರಗುತ್ತಿಗೆ: ಆರ್‌ವಿ
ಸೋನಿ ಆತ್ಮಹತ್ಯೆ: ಆರೋಪಿಗಳ ಜಾಮೀನು ಅರ್ಜಿ ವಜಾ
ಚಿಕ್ಕಮಗಳೂರು:ಉಗ್ರರ ಜಾಲ ಪತ್ತೆಗೆ ತೀವ್ರ ಶೋಧ
ಐದು ವರ್ಷದಲ್ಲಿ 10 ಲಕ್ಷ ಉದ್ಯೋಗ: ಸಿಎಂ
ಹೊರ ರಾಜ್ಯ ನೌಕರರಿಗೆ ಅವಕಾಶ ಇಲ್ಲ: ಕರವೇ