ಕಾಂಗ್ರೆಸ್ ಪಕ್ಷದ ಬಗ್ಗೆ ಹೀನಾಯವಾಗಿ ಮಾತನಾಡುತ್ತಿರುವ ಸಾರಿಗೆ ಸಚಿವ ಆರ್.ಅಶೋಕ್ ಅವರನ್ನು ಕೂಡಲೇ ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕಿಡಿಕಾರಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಪಕ್ಷದ ಭಿನ್ನಾಭಿಪ್ರಾಯ, ಒಳಜಗಳಗಳ ಕುರಿತು ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಚಿವ ಅಶೋಕ್ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಆಡಳಿತರೂಢ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣದೊಂದಿಗೆ, ಚಾರಿತ್ರ್ಯವಧೆ ಮಾಡುವಂತಹ ಕೆಲಸದಲ್ಲಿಯೇ ಹೆಚ್ಚು ತೊಡಗಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಅಲ್ಲದೇ ಉಪಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿ ಸರ್ಕಾರ ಟೆಂಡರ್ ಕರೆಯದೇ ಅಕ್ರಮವಾಗಿ ಕಾಮಗಾರಿಗಳನ್ನು ನಡೆಸುವ ಮೂಲಕ ಮತದಾರರನ್ನು ಸೆಳೆಯುವಲ್ಲಿ ನಿರತವಾಗಿದೆ ಎಂದು ದೂರಿದರು.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂಬ ಅಂಶ ತಿಳಿದಿದ್ದರೂ ಕೂಡ ಸರ್ಕಾರ ಕಂಡ,ಕಂಡಲ್ಲಿ ಕಾಮಗಾರಿ ನಡೆಸುತ್ತಿದೆ ಎಂದು ಹೇಳಿದರು. |