ಮಾನನಷ್ಟ ಮೊಕದ್ದಮೆ 'ಹಿಟ್ ಆಂಡ್ ರನ್' ರಾಜಕಾರಣಿಗಳಿಗೆ ಒಂದು ಉತ್ತಮ ಪಾಠ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ವಿಶೇಷ ಅಭಿಯೋಜಕರನ್ನು ನೇಮಿಸಿರುವ ಬಗ್ಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಯಾರ ಮೇಲೆ ಯಾವುದೇ ಆರೋಪ ಮಾಡಿ ಬಚಾವಾಗಬಹುದು ಎನ್ನುವುದು ಇನ್ನು ಕನಸು. ಇಂತಹ ಆರೋಪ ಮಾಡುವ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಲೆಂದೇ ಮಾನಹಾನಿ ಮೊಕದ್ದಮೆ ಹೂಡಲಾಗಿದೆ. ಅಧಿಕಾರ ದುರುಪಯೋಗ ಮಾಡಿಕೊಂಡವರು ಯಾರು ಎಂದು ಪ್ರತಿಪಕ್ಷ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದು ಸರಿಯಲ್ಲ. ಆ ಮೂಲಕ ಕೆಟ್ಟ ವಾತಾವರಣ ನಿರ್ಮಾಣವಾಗಿದ್ದು, ರಾಜಕಾರಣಿಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ ಎಂದರು. |