ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದತ್ತ ಅಭಿಯಾನಕ್ಕೆ ಶಾಂತಿಯುತ ತೆರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದತ್ತ ಅಭಿಯಾನಕ್ಕೆ ಶಾಂತಿಯುತ ತೆರೆ
ಬಜರಂಗದಳ, ವಿಶ್ವ ಹಿಂದೂ ಪರಿಷತ್ ಭಾನುವಾರ ಚಂದ್ರದ್ರೋಣ ಪರ್ವತದ ದತ್ತಪೀಠದಲ್ಲಿ ಏರ್ಪಡಿಸಿದ್ದ ದತ್ತ ಮಾಲೆ ಅಭಿಯಾನಕ್ಕೆ ಶಾಂತಿಯುತ ತೆರೆ ಬಿದ್ದಿದೆ.

ಡಿಸೆಂಬರ್‌‌ನಲ್ಲಿ ನಡೆಯುವ ದತ್ತ ಜಯಂತಿಗೆ ಪೂರಕವಾಗಿ ಅಭಿಯಾನಕ್ಕೆ ವಾರದ ಹಿಂದೆ ಚಾಲನೆ ನೀಡಲಾಗಿತ್ತು.

ದತ್ತ ಪೀಠದಲ್ಲಿ ಜಿಲ್ಲಾಡಳಿತ ತಾತ್ಕಾಲಿಕವಾಗಿ ಪ್ರತಿಷ್ಠಾಪಿಸಿದ್ದ ದತ್ತಾತ್ರೇಯ ಮೂರ್ತಿಗೆ ಭಕ್ತಿಪೂರ್ವಕವಾಗಿ ಇರುಮುಡಿ ಅರ್ಪಿಸುವ ಮೂಲಕ ಅಭಿಯಾನಕ್ಕೆ ತೆರೆ ಎಳೆಯಲಾಯಿತು.

ಗುಹಾಂತರ ದೇವಾಲಯ ಕುಸಿದಿರುವ ಹಿನ್ನೆಲೆಯಲ್ಲಿ ಪೀಠಕ್ಕೆ ಸಮೀಪದ ಗಾಳಿಕೆರೆ ಮಾರ್ಗದಲ್ಲಿ ಜಿಲ್ಲಾಡಳಿತ ನಿರ್ಮಿಸಿದ್ದ ತಾತ್ಕಾಲಿಕ ಟೆಂಟ್‌ನಲ್ಲಿ ದತ್ತಾತ್ರೇಯ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು. ಮಾಲಾಧಾರಿಗಳು ಅಕ್ಕಿ, ಬೆಲ್ಲ, ತೆಂಗಿನ ಕಾಯಿಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.

ದತ್ತ ಮಾಲಾಧಾರಿಗಳು 7 ಕಿ.ಮೀ ದೂರದ ಹೊನ್ನಮ್ಮನ ಹಳ್ಳದಲ್ಲಿ ಬೆಳಗ್ಗೆ ಪವಿತ್ರಾ ಸ್ನಾನ ಮಾಡಿ ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಪೀಠಕ್ಕೆ ತೆರಳಿದರು.

ಪಾದಯಾತ್ರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಪಾಲ್ಗೊಂಡಿದ್ದರು. ಶಾಸಕರಾದ ಸಿ.ಟಿ.ರವಿ, ಡಿ.ಎಸ್.ಸುರೇಶ್, ಮಾಜಿ ಶಾಸಕ ಸುನಿಲ್ ಕುಮಾರ್ ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಸಾಗಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೇಕಾಬಿಟ್ಟಿ ಹೇಳಿಕೆ ನೀಡಬೇಡಿ: ಸುದರ್ಶನ್
ಮೊಕದ್ದಮೆ ರಾಜಕಾರಣಿಗಳಿಗೆ ಪಾಠ: ಸುರೇಶ್
ಅಶೋಕ್‌‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ:ದೇಶಪಾಂಡೆ
ಜೆಡಿಎಸ್ ದುರ್ಬಲ ಆಗಿಲ್ಲ: ರೇವಣ್ಣ
ಮಾನನಷ್ಟ ಮೊಕದ್ದಮೆ ಸ್ವಾಗತಿಸುತ್ತೇನೆ: ಕುಮಾರಸ್ವಾಮಿ
ಹೊಗೇನಕಲ್: ಕೇಂದ್ರದ ಮಧ್ಯಸ್ಥಿಕೆಗೆ ಸಿಎಂ ಸ್ವಾಗತ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com