ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೇಂದ್ರದಿಂದ ಸೇಡಿನ ರಾಜಕಾರಣ:ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೇಂದ್ರದಿಂದ ಸೇಡಿನ ರಾಜಕಾರಣ:ಯಡಿಯೂರಪ್ಪ
ರಾಜ್ಯದ ಅಭಿವೃದ್ದಿಗೆ ಬೇಡಿಕೆ ಸಲ್ಲಿಸಿ ಕೇಂದ್ರ ಕಳುಹಿಸಿದ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಹಾಕುವ ಸಂಪ್ರದಾಯ ಮುಂದುವರಿಸುವ ಮೂಲಕ ಕೇಂದ್ರ ಸೇಡಿನ ರಾಜಕಾರಣ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆ ನಿಟ್ಟಿನಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಹಾಗೂ ಹೈದರಬಾದ್-ಕರ್ನಾಟಕ ಅಭಿವೃದ್ಧಿಗೆ ಕೂಡಲೇ ಗಮನ ಹರಿಸಬೇಕೆಂದು ಆಗ್ರಹಿಸಿ ರಾಜಧಾನಿ ರಾಜ್‌ಘಾಟ್‌ನಲ್ಲಿ ಪಕ್ಷ ಭೇದ ಮರೆತು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ಒತ್ತಡಗಳಿಗೆ ಮಣಿದು ಮಲತಾಯಿ ಧೋರಣೆ ಅನುಸರಿಸುತ್ತಿದೆ. ನಾವು ಕೇಂದ್ರ ಸರ್ಕಾಕ್ಕೆ ಮೂರು ದಿನಗಳ ಗುಡುವು ನೀಡುತ್ತಿದ್ದೇವೆ.

ಒಂದು ವೇಳೆ ಮೂರು ದಿನದೊಳಗೆ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ ಸುಮ್ಮನೆ ಕೂರುವುದಿಲ್ಲ. ಬದಲಿಗೆ ರಾಜ್ಯದ ಎಲ್ಲ ಶಾಸಕರು ಮತ್ತು ಸಂಸದರನ್ನು ಜತೆಗೂಡಿಸಿಕೊಂಡು ಪ್ರಧಾನಿಯವರನ್ನು ಭೇಟಿ ಮಾಡಲಾವುಗುದು. ಈ ಸಮಯದಲ್ಲಿ ಸೂಕ್ತ ಸ್ಪಂದನೆ ಸಿಗದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ಮುಂದೂಡಿಕೆ?

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಸಂಬಂಧ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಸಂಬಂಧ ವಿಧಾನಸಭಾಧ್ಯಕ್ಷರೊಂದಿಗೆ ಚರ್ಚಿಸಿದ್ದೇನೆ. ವಿಧಾನಸಭಾ ಉಪಚುನಾವಣೆ ಘೋಷಣೆಯಾದರೆ ವಿಧಾನಮಂಡಲ ಅಧಿವೇಶನ ತಡವಾಗಬಹುದು.

ಆದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು, ಸೂಕ್ತ ಸಮಯ ನಿರ್ಧರಿಸಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮೈಸೂರು ಗೊಮ್ಮಟನಿಗೆ ಮಸ್ತಕಾಭಿಷೇಕ
ದತ್ತ ಅಭಿಯಾನಕ್ಕೆ ಶಾಂತಿಯುತ ತೆರೆ
ಬೇಕಾಬಿಟ್ಟಿ ಹೇಳಿಕೆ ನೀಡಬೇಡಿ: ಸುದರ್ಶನ್
ಮೊಕದ್ದಮೆ ರಾಜಕಾರಣಿಗಳಿಗೆ ಪಾಠ: ಸುರೇಶ್
ಅಶೋಕ್‌‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ:ದೇಶಪಾಂಡೆ
ಜೆಡಿಎಸ್ ದುರ್ಬಲ ಆಗಿಲ್ಲ: ರೇವಣ್ಣ