NRB ಮಂಗಳೂರು ಮತ್ತು ಬೆಂಗಳೂರು ನಡುವಿನ ಶಿರಾಡಿಘಾಟ್ ರಸ್ತೆಯ ಕಳಪೆ ಕಾಮಗಾರಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ರಾಜ್ಯ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ.ಶಿರಾಡಿಘಾಟ್ ರಸ್ತೆಯ ಕಳೆಪೆ ಕಾಮಗಾರಿ ವಿರುದ್ಧ ಮಂಗಳೂರಿನ ಸದಾಶಿವರಾವ್ ಹಾಗೂ ಬೆಂಗಳೂರಿನ ಬಿ.ಕೃಷ್ಣಭಟ್ ಅವರು ಸಲ್ಲಿಸಿದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.ಅಲ್ಲದೇ ಪ್ರಕರಣದ ತನಿಖೆ ನಡೆಸಿ ಶೀಘ್ರವೇ ಕೇಂದ್ರ ವಿಚಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದು,