ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಗ್ರರ ನಿಗ್ರಹಕ್ಕೆ ಸುರಕ್ಷತಾ ಆಯೋಗ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಗ್ರರ ನಿಗ್ರಹಕ್ಕೆ ಸುರಕ್ಷತಾ ಆಯೋಗ: ಸಿಎಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಉಗ್ರರ ಚಟುವಟಿಕೆಗಳನ್ನು ಹತ್ತಿಕ್ಕಲು ಸುಸಜ್ಜಿತ ಸುರಕ್ಷತಾ ಆಯೋಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ತಿಳಿಸಿದರು.

ನಗರದ ಮೈಸೂರು ರಸ್ತೆಯ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಗರಿಕ ಸಮಾಜಕ್ಕೆ ಸವಾಲಾಗಿರುವ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಮಾಡುವ ಘಟಕಕ್ಕೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಭಯೋತ್ಪಾದನಾ ಚಟುವಟಿಕೆಗಳು ಅಧುನಿಕ ಅಪರಾಧ ಪ್ರಕರಣಗಳಿಂದ ಹಿಂದಿಗಿಂತ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಾಗಿದೆ. ಭಯೋತ್ಪಾದನೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪೊಲೀಸರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಕೂಡ ದುಷ್ಟ ಶಕ್ತಿಯ ವಿರುದ್ಧ ಹೋರಾಡುವ ಪೊಲೀಸರಿಗೆ ಸಹಾನುಭೂತಿ ತೋರಬೇಕಾಗಿದೆ ಎಂದ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ 97 ವಸತಿ ಸಮುಚ್ಚಯ ನಿರ್ಮಾಣಕ್ಕೆ 47 ಕೋಟಿ ರೂಪಾಯಿಗಳನ್ನು ಒದಗಿಸುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೆಗ್ಗಡೆ ಷಷ್ಟ್ಯಬ್ದಿ: ಗ್ರಾಮೀಣಾಭಿವೃದ್ಧಿ ಕಾರ್ಯಾಗಾರ
ರಾಜ್ಯಕಾರಣದಲ್ಲಿ ಮಹತ್ತರ ಬದಲಾವಣೆ:ವರ್ತೂರ್
ಅಸ್ನೋಟಿಕರ್ ವಿರುದ್ಧ ತನಿಖೆ: ಲೋಕಾಯುಕ್ತ
ಶಂಕಿತ ನಕ್ಸಲೀಯರ ಬಂಧನ ?
ನವೆಂಬರ್‌ನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಶಾಮೀಲು:ಡಿಕೆಶಿ