ಸರ್ಕಾರದಲ್ಲಿನ ಸಚಿವರ ಕಾರ್ಯವೈಖರಿ ಬಗ್ಗೆ ನನಗೆ ಸಮಾಧಾನ ಇದೆ. ಬಜೆಟ್‌ನಲ್ಲಿ ಪ್ರಕಟಿಸಿದ ಕಾರ್ಯಕ್ರಮಗಳ ಶೇ 90 ರಷ್ಟಕ್ಕೆ ಸಂಬಂಧಪಟ್ಟಂತೆ ಎಲ್ಲಾ ಇಲಾಖೆಗಳಲ್ಲಿಯೂ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಚಿವರು ಅಭಿವೃದ್ದಿಗಳ ಪರಾಮರ್ಶೆ ನಡೆಸುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಪ್ರಯತ್ನ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಇದರಿಂದ ಮುಂದಿನ ವಿಧಾನಸಭೆ ಉಪಚುನಾವಣೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದರು.
ಜನ ಈ ಮೈತ್ರಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕು. ರಾಜ್ಯ ಸರ್ಕಾರದ ಅಭಿವೃದ್ದಿಪರ ಧೋರಣೆಯನ್ನು ಮೆಚ್ಚಿ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಕೇಂದ್ರದ ಮಲತಾಯಿ ಧೋರಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ, ನೆರೆ ಪರಿಹಾರದ ಬಗ್ಗೆ ಕೇಂದ್ರ ಅಧ್ಯಯನ ತಂಡ ಬಂದು ಹೋಗಿದ್ದರೂ ಯಾವುದೇ ಪರಿಹಾರ ನೀಡಿಲ್ಲ ಎಂದರು.
|