ಇಲ್ಲಿನ ಹೂಡಿ ರಸ್ತೆ ಶಾಂತಿನಿಕೇತನ ಸಮೀಪ ನಿರ್ಮಾಣ ಹಂತದಲ್ಲಿದ್ದ 15ಅಂತಸ್ತಿನ ವಾಣಿಜ್ಯ ಸಂಕೀರ್ಣವೊಂದು ಗುರುವಾರ ಸಂಜೆ ಭಾಗಶಃ ಕುಸಿದು ಬಿದ್ದ ಪರಿಣಾಮ ನೂರಾರು ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.
ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದ ಸಂದರ್ಭದಲ್ಲಿ ನೂರಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರತರಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲದೇ ಕಟ್ಟಡದ ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಹೇಳಿದೆ.
ಕಟ್ಟಡ ಕುಸಿತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ, ಸಾವನ್ನಪ್ಪಿದ್ದಾರೆ ಎಂಬ ನಿಖರ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |