ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಗೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿರುವುದು ನಿಜ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಪ್ಪಿಕೊಂಡಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇನ್ನೂ ಅಂತಿಮಗೊಂಡಿಲ್ಲ. ಆದರೆ ಈ ಹೊಂದಾಣಿಕೆ ಕುರಿತು ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಈ ನಡುವೆ ಬಿಜೆಪಿ ಸಚಿವರೊಂದಿಗೆ ಸಿದ್ದರಾಮಯ್ಯನವರು ಮಾತುಕತೆ ನಡೆಸಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ತೆರಳಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಹೊಂದಾಣಿಕೆ ಕುರಿತು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮತ್ತೊಮ್ಮೆ ಪುನರುಚ್ಚರಿಸಿದ ಖರ್ಗೆ, ಶೀಘ್ರದಲ್ಲಿ ಹೈಕಮಾಂಡ್ ಈ ಕುರಿತು ನಿರ್ಧಾರ ಪ್ರಕಟಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. |