ರಾಜ್ಯದ ವಿವಿಧೆಡೆಗಳಲ್ಲಿನ ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಜರಂಗ ದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು 1 ಲಕ್ಷ ಬಾಂಡ್ ಮೇಲೆ ಷರತ್ತು ಬದ್ದ ಜಾಮೀನು ನೀಡಿದೆ.
ಸಮಾಜಿಕ, ಧಾರ್ಮಿಕ ಭಾವನೆ ಕೆರಳಿಸುವಂತಹ ಹಾಗೂ ಗಲಭೆಗೆ ಕಾರಣವಾಗುವಂತಹ ಹೇಳಿಕೆ ನೀಡದಿರಲು ಮಹೇಂದ್ರ ಕುಮಾರ್‌ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ. |