ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರದಿಂದ ಸೇಡಿನ ರಾಜಕಾರಣ: ಎಂ.ಪಿ.ಪ್ರಕಾಶ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರದಿಂದ ಸೇಡಿನ ರಾಜಕಾರಣ: ಎಂ.ಪಿ.ಪ್ರಕಾಶ್
ಹೂವಿನ ಹಡಗಲಿಯಿಂದ ಬಳ್ಳಾರಿಗೆ ಎಂಜಿನಿಯರಿಂಗ್ ಕಾಲೇಜು ಸ್ಥಳಾಂತರ ಮಾಡಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಇದೊಂದು ಸೇಡಿನ ರಾಜಕಾರಣ ಎಂದು ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಪ್ರಕಾಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಹೂವಿನ ಹಡಗಲಿಯಲ್ಲಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದರೂ, ಶೇ. 85ರಷ್ಟು ಫಲಿತಾಂಶ ಪಡೆದಿದೆ. ಬಹುತೇಕ ಬಡ ವಿದ್ಯಾರ್ಥಿಗಳೇ ಇದ್ದು, ಕಾಲೇಜನ್ನು ಬಳ್ಳಾರಿಗೆ ಸ್ಥಳಾಂತರ ಮಾಡಿದರೆ ಬಡವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿಯ ವಿವಿಧ ತಾಲೂಕುಗಳು ಬರಪೀಡಿತ ತಾಲೂಕುಗಳೆಂದು ನಂಜುಂಡಪ್ಪ ವರದಿಯಲ್ಲಿ ಘೋಷಿಸಲ್ಪಟ್ಟಿದ್ದರೂ, ಹೂವಿನ ಹಡಗಲಿಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿಗೆ ಹೆಚ್ಚಿನ ಸೌಲಭ್ಯ ನೀಡದೆ ಸರ್ಕಾರ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

ಈ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಶನಿವಾರ ಬೆಳಿಗ್ಗೆ ಸಮಯ ನಿಗದಿ ಮಾಡಲು ಕೋರಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಈ ನಡುವೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಹಾಗೂ ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನ ಕಲ್ಪಿಸುವಂತೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ನಿರ್ಧರಿಸಿರುವ ರಾಜ್ಯ ಸರ್ಕಾರ ಕ್ರಮ ಸ್ವಾಗತಾರ್ಹವಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಾಲಿಗೆ ಪ್ರೋತ್ಸಾಹ ಧನ:ಸರ್ಕಾರ
ಮಹೇಂದ್ರಗೆ ಹೈಕೋರ್ಟ್ ಜಾಮೀನು
ರಾಜ್ಯೋತ್ಸವ ಪ್ರಶಸ್ತಿಗೆ 10ಸಾವಿರ ಅರ್ಜಿ !
ಮೈತ್ರಿಗೆ ಸಿದ್ದರಾಮಯ್ಯ ವಿರೋಧ:ಖರ್ಗೆ
ಈಶ್ವರಪ್ಪ ಹೇಳಿಕೆಗೆ ವಿಶ್ವನಾಥ್ ಆಕ್ರೋಶ
ಶಾಸ್ತ್ರೀಯ ಸ್ಥಾನ: ದೆಹಲಿಗೆ ನಿಯೋಗ-ಸಿಎಂ