ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹೊರಬಂದಿರುವ ಜೆಡಿಎಸ್ ಎಂಟು ವಿಧಾನಸಭಾ ಉಪಚುನಾವಣೆ ಪೈಕಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಈಗಾಗಲೇ ಮದ್ದೂರು, ತುರುವೇಕೆರೆ, ಮಧುಗಿರಿ, ದೊಡ್ಡಬಳ್ಳಾಪುರ, ದೇವದುರ್ಗ ಮತ್ತು ಅರಭಾವಿ. ಆದರೆ ಇವುಗಳಲ್ಲಿ ಹೆಚ್ಚು ಪ್ರಬಲವಾಗಿರುವ ನಾಲ್ಕು ಕ್ಷೇತ್ರಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಹುತೇಕ ಮದ್ದೂರು, ತುರುವೇಕೆರೆ, ಮಧುಗಿರಿ, ದೊಡ್ಡಬಳ್ಳಾಪುರ ಅಥವಾ ದೇವದುರ್ಗ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆ ಇದ್ದು, ಈ ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಈ ನಡುವೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದು, ಜೆಡಿಎಸ್ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. |