ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ಮಾಜಿ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ಉಪಾಧ್ಯಕ್ಷ ಜಗ್ಗೇಶ್ ನಿರ್ಧರಿಸಿದ್ದಾರೆ.ನಗರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿಯಾಗಬೇಕೆಂಬ ದೃಷ್ಟಿಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮ ನೀಡಿದ್ದೇನೆ. ಆದರೆ, ಮುಂಬರುವ ಉಪಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.ಮರು ಚುನಾವಣೆಯಲ್ಲಿ ತಾಲೂಕಿನ ಮತ್ತೊಬ್ಬ ಮಾಜಿ ಶಾಸಕ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಎಂ.ಡಿ. ಲಕ್ಷ್ಮೀನಾರಾಯಣ್ ಸಹ ಸ್ಪರ್ಧಿಸುತ್ತಿಲ್ಲ ಎಂದು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.ಬಿಜೆಪಿಯ ಅಭ್ಯರ್ಥಿ ಯಾರು ಎಂಬ ಗುಟ್ಟನ್ನು ಬಿಟ್ಟುಕೊಡದ ಅವರು, ಪಕ್ಷದ ಹೈಕಮಾಂಡ್ ಯಾರನ್ನು ಸೂಚಿಸುತ್ತದೊ ಅವರನ್ನು ಪಕ್ಷದ ಕಾರ್ಯಕರ್ತರೆಲ್ಲಾ ಶ್ರಮಪಟ್ಟು ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. |
|