ಕಾಂಗ್ರೆಸ್ ನೊಂದಿಗಿನ ಮೈತ್ರಿ ಮಾಡಲು ಇಚ್ಚಿಸಿದ ಜೆಡಿಎಸ್ ಮುಂಬರುವ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ಸಾಧ್ಯವಿಲ್ಲ. ಬದಲಾಗಿ ಇತರ ಸಣ್ಣ ಪುಟ್ಟ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಸ್ಪರ್ಧಿಸಲಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಬಲಿಷ್ಠವಾಗಿದೆ. ಪಕ್ಷ ಗೆಲ್ಲುವ ವಿಶ್ವಾಸ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಉಪಚುನಾವಣೆಯ ಕಣಕ್ಕಿಳಿಯುವ ಎಲ್ಲಾ ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲುವು ಸಾಧಿಸುವ ಮೂಲಕ ಬಿಜೆಪಿಗೆ ಗರ್ವಭಂಗವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
|