ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಕುರಿತು ಸರ್ವಪಕ್ಷಗಳ ನಿಯೋಗದೊಂದಿಗೆ ತೆರಳದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಮುಂದಿನ ತಿಂಗಳ ಐದರಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವ ಕುರಿತು ಕೇಂದ್ರಕ್ಕೆ ಮನವಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಆಹ್ವಾನಿಸಿರುವ ಸರ್ವಪಕ್ಷ ನಿಯೋಗದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದಿದ್ದಾರೆ.
ಮುಖ್ಯಮಂತ್ರಿಗಳು ಪ್ರತಿಪಕ್ಷ ನಾಯಕರೊಂದಿಗೆ ಚರ್ಚಿಸದೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿಯೋಗದೊಂದಿಗೆ ಕಾಂಗ್ರೆಸ್ ತೆರಳುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಏತನ್ಮಧ್ಯೆ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಕೊಡಿಸುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಕೈಜೋಡಿಸಿ ಕನ್ನಡಿಗರ ಬಹು ವರ್ಷಗಳ ಬೇಡಿಕೆ ಈಡೇರಿಕೆಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಮತ್ತೊಮ್ಮೆ ಮನವಿ ಮಾಡಿದ್ದಾರೆ. |