ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆಗಳ ಕುರಿತು ಗುಪ್ತಚರ ಇಲಾಖೆಯು ವರದಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕರು ಸರಣಿ ಬಾಂಬ್ ಸ್ಫೋಟ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ರಾಜ್ಯಕ್ಕೆ ಎಚ್ಚರಿಕೆ ನೀಡಿದ್ದು, ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಕುರಿತು ಸ್ವತಃ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ತೀವ್ರ ನಿಗಾ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭಯೋತ್ಪಾದಕ ಕೃತ್ಯಗಳ ಬಗ್ಗೆ ತರಬೇತಿ ನೀಡಿ, ಅವರನ್ನು ವಿಧ್ವಂಸಕ ಕೃತ್ಯಗಳಿಗೆ ಬಳಸಿಕೊಳ್ಳಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. |