ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಮ್ಮಾಳದ ಬಳಿ ಸಂಭವಿಸಿದೆ.
ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಮೃತರು ಕನಕಪುರ ಪಟ್ಟಣದವರೆಂದು ತಿಳಿದು ಬಂದಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಬಸ್‌ಗೆ ಬೆಂಕಿ ಹಚ್ಚಿದ್ದು, ಬಸ್ ಭಾಗಶಃ ಸುಟ್ಟುಹೋಗಿದೆ. ಈ ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಸಾತನೂರು ಠಾಣೆಯಲ್ಲಿ ದಾಖಲಿಸಲಾಗಿದೆ. |