ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ತಿಂಗಳ 5 ರಂದು ತೆರಳಲಿರುವ ಸರ್ವ ಪಕ್ಷ ನಿಯೋಗದಿಂದ ಹಿಂದೆ ಸರಿದಿರುವ ವಿರೋಧ ಪಕ್ಷಗಳ ಕ್ರಮವನ್ನು ಹೈದರಾಬಾದ್-ಕರ್ನಾಟಕ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ತೀರಾ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸಂವಿಧಾನ ತಿದ್ದುಪಡಿ ತರಬೇಕು ಎಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಯವರು ಮಾಡುತ್ತಿರುವ ಪ್ರಯತ್ನಕ್ಕೆ ವಿರೋಧ ಪಕ್ಷಗಳು ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ವೈಜನಾಥ ಪಾಟೀಲ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಪಕ್ಷಬೇಧ ಮರೆತು ಸರ್ಕಾರದ ಜೊತೆ ಕೈ ಜೋಡಿಸಿ ಸಹಕಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿದರು. |