ರಾಜ್ಯಾದ್ಯಂತ ಚರ್ಚ್ ಮೇಲಿನ ದಾಳಿ ಪ್ರಕರಣದ ಕುರಿತು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಸಂಸದ ಸಾಂಗ್ಲಿಯಾನ ಮತ್ತೊಮ್ಮೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದರ ಕುರಿತು ತಮಗೆ ನಂಬಿಕೆಯಿಲ್ಲ. ಈ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಪ್ರಕರಣ ನಡೆಯಲು ರಾಜ್ಯ ಸರ್ಕಾರದ ವೈಫಲ್ಯ ಕಾರಣ ಎಂದು ದೂರಿದ ಅವರು, ಸರ್ಕಾರ ತನಿಖೆಯನ್ನು ತಮಗೆ ಬೇಕಾದ ರೀತಿಯಲ್ಲಿ ನಡೆಸುತ್ತಿದೆ ಎಂದು ಆರೋಪಿಸಿದರು.
ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಎದ್ದುಕಾಣುತ್ತದೆ ಎಂದು ಗಂಭೀರ ಆರೋಪ ಮಾಡಿದ ಸಾಂಗ್ಲಿಯಾನ, ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ದೂರಿದ್ದಾರೆ. |